ಬೆಂಗಳೂರು : ಬ್ರಾಹ್ಮಣ ಸಂಪ್ರದಾಯದಂತೆ ಹಿರಿಯ ನಟ ಶಿವರಾಂ ಅವರ ಅಂತ್ಯಸಂಸ್ಕಾರ ನಡೆಯಿತು.ಬೆಂಗಳೂರಿನ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನೆರವೇರಿದ ಬಳಿಕ ಪೊಲೀಸ್ ಗೌರದೊಂದಿಗೆ ಶಿವರಾಂ ಅಂತ್ಯಸಂಸ್ಕಾರ ನಡೆಯಿತು.
ಗುರುಸ್ವಾಮಿಯಾಗಿದ್ದ ಶಿವರಾಂಗೆ ಪಂಚಾಮೃತ ಅಭಿಷೇಕ ಮತ್ತು ಕೇಸರಿ ವಸ್ತ್ರ ಸಮರ್ಪಿಸಿ ಚಿತಾಗಾರಾದಲ್ಲಿ ಬ್ರಾಹ್ಮಣ ಸ್ಮಾರ್ತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಅಯ್ಯಪ್ಪ ಭಕ್ತರು ಭಜನೆ ಮಾಡಿ ಅಯ್ಯಪ್ಪನಿಗೆ ಇಷ್ಟವಾದ ಕರ್ಪೂರವನ್ನು ಸಮರ್ಪಿಸಿದರು. ಶಿವರಾಂ ಪುತ್ರರಾದ ಹಿರಿಯ ಮಗ ರವಿಶಂಕರ್ ಮತ್ತು ಲಕ್ಷ್ಮೀಶ್ ಅಗ್ನಿ ಸ್ಪರ್ಶ ಮಾಡಿದರು. ಈ ಮೊದಲು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಶಿವರಾಂ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು.
ಸಚಿವ ಆರ್. ಅಶೋಕ್ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಶಿವರಾಂ ಅವರಿಗೆ 84 ವರ್ಷ ವಯಸ್ಸಾಗಿತ್ತು. ಆರು ದಶಕಗಳಿಂದ ಕನ್ನಡ ಸಿನಿಮಾ ರಂಗದ ನಂಟುಹೊಂದಿದ್ದ ಅವರು, ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಂ ನಾಯಕ ನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದವರು.
PublicNext
05/12/2021 01:49 pm