ಹುಬ್ಬಳ್ಳಿ: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಹ್ಯಾಟ್ರಿಕ್ ನಿರ್ದೇಶಕ ಜೋಗಿ ಪ್ರೇಮ್ ಅವರ ನಿರ್ದೇಶನದ ಮತ್ತೊಂದು ಸಿನಿಮಾ ಏಕ್ ಲವ್ ಯಾ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.
ಹೌದು.. ರಕ್ಷಿತಾಸ್ ಫಿಲ್ಮ್ ಫ್ಯಾಕ್ಟರಿ ನಿರ್ಮಾಣ ಮಾಡಿರುವ ಏಕ್ ಲವ್ ಯಾ ಚಿತ್ರದ ಆಡಿಯೋ ಲಾಂಚಿಂಗ್ ಮಾಡಲಾಯಿತು. ಈಗಾಗಲೇ ಮೂರು ಹಾಡುಗಳು ಬಿಡುಗಡೆಯಾಗಿದ್ದು, ನಾಲ್ಕನೇ ಹಾಡನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲಾಯಿತು.
ಚಿತ್ರದಲ್ಲಿ ಹೊಸ ನಾಯಕ ನಟ ರಾಣಾ,ನಾಯಕಿ ರೀಷ್ಮಾ ನಾಣಯ್ಯ ಹಾಗೂ ರಚಿತಾ ರಾಮ್ ಸೇರಿದಂತೆ ಸಾಕಷ್ಟು ತಾರಾಗಣ ಚಿತ್ರದಲ್ಲಿ ಅಭಿನಯಿಸಿದೆ.
PublicNext
11/12/2021 09:44 pm