ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಂಪಲ್​ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜಾ

ಬೆಂಗಳೂರು: ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜಾ ಸಿಂಪಲ್‌ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಟಿ ಶುಭಾ ಪೂಂಜಾ ಮಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಿಂಪಲ್ ಆಗಿ ಮ್ಯಾರೇಜ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸುಮಂತ್ ಅವರನ್ನು ನಟಿ ಶುಭಾ ಪೂಂಜಾ ಪ್ರೀತಿಸಿ ಮದುವೆಯಾಗಿದ್ದಾರೆ. ಸುಮಾರು ನಾಲ್ಕೈದು ವರ್ಷಗಳಿಂದ ಇದ್ದ ಪ್ರೀತಿಗೆ ಇಂದು ಅಧಿಕೃತವಾಗಿ ಮುದ್ರೆ ಬಿದ್ದಿದೆ.

ಉಡುಪಿ ಜಿಲ್ಲೆಯ ಶಿರ್ವದ ಮಜಲಬೆಟ್ಟುಬೀಡುವಿನಲ್ಲಿ ಕುಟುಂಬದವರು ಹಾಗು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಿತು. ಹಲವಾರು ಸಿನಿರಂಗದ ಗಣ್ಯರು ಶುಭ ಪೂಂಜಾಗೆ ಶುಭಾಶಯ ತಿಳಿಸಿದ್ದಾರೆ. ನಟಿ ಮದುವೆಯಾಗಿರುವ ಬಗ್ಗೆ ಸ್ವತಃ ನಟಿ ಶುಭ ಪೂಂಜಾ ಪೋಸ್ಟ್​ವೊಂದನ್ನು ಮಾಡಿದ್ದಾರೆ.

Edited By : Vijay Kumar
PublicNext

PublicNext

05/01/2022 04:10 pm

Cinque Terre

41.78 K

Cinque Terre

0