ಬೆಂಗಳೂರು: ವಿವಿಧ ಚಿತ್ರರಂಗದ ಅನೇಕ ನಟ ನಟಿಯರು ಕೋವಿಡ್ ಸೋಂಕಿಗೆ ತುತ್ತಾಗುತ್ತಿದ್ದು, ಇದೀಗ ಸ್ಯಾಂಡಲ್ವುಡ್ ನಟಿ ನಿಶ್ವಿಕಾ ನಾಯ್ಡು ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ನಿಶ್ವಿಕಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. "ನನಗೆ ಕೋವಿಡ್ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಿ ನಾನು ಐಸೋಲೇಟ್ ಆಗಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದವವರು ದಯವಿಟ್ಟು ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿ" ಎಂದು ಮನವಿ ಮಾಡಿಕೊಂಡಿದ್ದಾರೆ.
PublicNext
08/01/2022 05:14 pm