ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ; ನಟ ಶಿವಣ್ಣ ಉದ್ಘಾಟನೆ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಸ್ಯಾಂಡಲ್​​ವುಡ್ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಭಾಗಿಯಾಗಲಿದ್ದಾರೆ.

ಭಾನುವಾರದಿಂದ (ಜನವರಿ 9) ಆರಂಭವಾಗಲಿರುವ ಮೇಕೆದಾಟು ಪಾದಯಾತ್ರೆಯನ್ನು ನಟ ಶಿವರಾಜ್​ಕುಮಾರ್​ ಉದ್ಘಾಟಿಸಲಿದ್ದಾರೆ. ನಾಳೆ ಬೆಳಗ್ಗೆ ಮೇಕೆದಾಟುವಿನ ಸಂಗಮದಿಂದ ಪಾದಯಾತ್ರೆ ಶುರು ಆಗಲಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಿಂದ ಪಾದಯಾತ್ರೆ ಆರಂಭವಾಗಲಿದೆ.

ಈ ಹಿಂದೆಯೇ ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲ ಇದೆ ಎಂದು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜೈರಾಜ್ ಹೇಳಿದ್ದರು. ಇದೊಂದು ಪಕ್ಷಾತೀತವಾದ ಹೋರಾಟ. ಹೀಗಾಗಿ ಇದರಲ್ಲಿ ಎಲ್ಲರು ಭಾಗವಹಿಸಬೇಕು ಎನ್ನುವ ನಿರ್ಧಾರ ಮಾಡಿದ್ದೇವೆ. ಕಲಾವಿದರನ್ನು ಪಾದಯಾತ್ರೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಲಾಗಿದೆ ಎಂದಿದ್ದರು.

Edited By : Nirmala Aralikatti
PublicNext

PublicNext

08/01/2022 07:58 pm

Cinque Terre

94.21 K

Cinque Terre

41