ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'RRR' ಸಿನಿಮಾ ರಿಲೀಸ್ ಗೆ ಹೊಸ ಮುಹೂರ್ತ ಫಿಕ್ಸ್ !

ಹೈದ್ರಾಬಾದ್: ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ RRR ಸಿನಿಮಾ ಬಿಡುಗಡೆಗೆ ಹೊಸ ದಿನಾಂಕ‌‌ ನಿಗದಿಯಾಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7 ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ರಿಲೀಸ್ ಆಗಬೇಕಿತ್ತು.ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗಿತ್ತು. ಅಲ್ಲದೆ ರಾಜ್ಯದ ಹಲವೆಡೆಗಳಲ್ಲಿ ಚಿತ್ರಮಂದಿರಗಳು ಮುಚ್ಚಲ್ಪಟ್ಟಿದ್ದು, ಇನ್ನೂ ಹಲವೆಡೆ ಶೇ 50ವರಷ್ಟು ಮಾತ್ರ ಆಸನಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಸಿನಿಮಾ ಬಿಡುಗಡೆ ಮಾಡೋದನ್ನು ಮುಂದಕ್ಕೆ ಹಾಕಲಾಯ್ತು. ಈಗ ಸಿನಿಮಾ ತಂಡ ಹೊಸ ರಿಲೀಸ್‌ ಡೇಟ್ ನೀಡಿದೆ.

ಯಾವಾಗ ಬರುತ್ತೇ ಆರ್ ಆರ್ ಆರ್?

ಇಡೀ ಚಿತ್ರ ಪ್ರೇಮಿಗಳು ತ್ರಿಬಲ್ "R" ಸಿನಿಮಾಗಾಗಿ ಕಾದು ಕುಳಿತಿದ್ದಾರೆ. ಅಂತೂ ರಾಜಮೌಳಿ ಹೊಸ ದಿನಾಂಕ ಅನೌನ್ಸ್ ಮಾಡಿದ್ದಾರೆ. ಆದ್ರೆ ಇಲ್ಲೊಂದು ಟ್ವಿಸ್ಟ್ ಇದೆ. ಎರಡು ದಿನಾಂಕಗಳಿಗೆ RRR ಕರ್ಚಿಫ್ ಹಾಕಿದೆ. 18 ಮಾರ್ಚ್ ಅಥವಾ ಏಪ್ರಿಲ್ 28 ರಲ್ಲಿ ಒಂದು ಡೇಟ್‌ನಲ್ಲಿ ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು RRRಬಳಗ ತಿಳಿಸಿದೆ. ದೇಶದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗಿ, ಎಲ್ಲ ಥಿಯೇಟರ್‌ಗಳಲ್ಲಿ 100% ಆಸನ ವ್ಯವಸ್ಥೆ ಸಿಕ್ಕರೆ ಮಾರ್ಚ್ 18ಕ್ಕೆ ಬರುತ್ತೇವೆ. ಇಲ್ಲ ಏಪ್ರಿಲ್ 28 ಕ್ಕೆ ಸಿನಿಮಾ ರಿಲೀಸ್ ಮಾಡಲಿದ್ದೇವೆ ಎರಡು ರಿಲೀಸ್ ಡೇಟ್‌ನ್ನು RRR ತಂಡ ಬ್ಲ್ಯಾಕ್ ಮಾಡಿಕೊಂಡಿದೆ.

ಈ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಮಾಡಿದ್ದು, ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ನಟಿ ಆಲಿಯಾ ಭಟ್​ ಈ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ಅಜಯ್​ ದೇವಗನ್​ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತಮಿಳು, ತೆಲುಗು ಹಿಂದಿ ಹಾಗೂ ಮಾಲಯಾಳಂ ಭಾಷೆಯಲ್ಲಿ ರಿಲೀಸ್ ಆಗ್ತಿರುವ ತ್ರಿಬಲ್ ಆರ್ ಸಿನಿಮಾವನ್ನು ಕರ್ನಾಟಕದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ವಿತರಣೆ ಮಾಡುತ್ತಿದೆ.

Edited By :
PublicNext

PublicNext

21/01/2022 09:26 pm

Cinque Terre

53.47 K

Cinque Terre

0