ಸ್ಯಾಂಡಲ್ ವುಡ್ ನ ಹಿರಿಯ ಪೋಷಕ ನಟ ಅಶೋಕ್ ರಾವ್ ಇನ್ನಿಲ್ಲ ಅಶೋಕ್ ರಾವ್ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ವಿದ್ಯಾರಣ್ಯಪುರದ ನಿವಾಸದಲ್ಲಿ ಪಾರ್ಥೀವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅಶೋಕ್ ಇನ್ನು ನೆನಪು ಮಾತ್ರ.
ಡಾ.ರಾಜಕುಮಾರ್ ಅಭಿನಯದ ಪರಶುರಾಮ ಚಿತ್ರದಲ್ಲಿ ಖಳನಾಯಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಅವರು, ಕಳೆದ ಹದಿನೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಪೋಷಕ ಪಾತ್ರ ಹಾಗೂ ಖಳನಾಯಕನಾಗಿ ಸ್ಯಾಂಡಲ್ ವುಡ್ ಲ್ಲಿ ಗುರುತಿಸಿಕೊಂಡಿದ್ದರು ಅವರು ಪತ್ನಿ, ಮಗ ಮತ್ತು ಸೊಸೆಯನ್ನು ಆಗಲಿದ್ದಾರೆ.
PublicNext
02/02/2022 11:53 am