ಚಂಡೀಗಡ: ಬಾಲಿವುಡ್ ನಟ ಸೋನು ಸೂದ್ ಅವರ ಸಹೋದರಿ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಇದರಲ್ಲಿ ತಾವು ಸಹೋದರಿ ಪರ ಪ್ರಚಾರ ಮಾಡುವುದಿಲ್ಲ ಎಂದು ಸೋನು ಸೂದ್ ಈ ಹಿಂದೆ ಸ್ಪಷ್ಟವಾಗಿ ಹೇಳಿದ್ದರು. ಆದರೆ ಈಗ ಪಂಜಾಬ್ನ ಮೋಗಾದಲ್ಲಿ ನಟ ಮತರದಾರರನ್ನು ಪ್ರಭಾವಿಸಲು ಪ್ರಯತ್ನಿಸಿರುವ ಆರೋಪ ಕೇಳಿ ಬಂದಿದೆ. ಹಾಗೆಯೇ ನಟರಿಂದ ನ್ಯಾಷನಲ್ ಹೀರೋ ಬಿರುದು ಪಡೆದ ನಟನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ತಡರಾತ್ರಿಯ ಬೆಳವಣಿಗೆಯಲ್ಲಿ ಚುನಾವಣಾ ಆಯೋಗದಿಂದ ಅಭಿಪ್ರಾಯ ಕೇಳಿದ ಮೊಗ ಪೊಲೀಸರು ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹೊರಡಿಸಿದ ನಿಷೇಧಾಜ್ಞೆ ಉಲ್ಲಂಘನೆಗಾಗಿ ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಸೋನು ಸೂದ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಸೋನು ಸೂದ್ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅವರ ನಿವಾಸಕ್ಕೆ ಹಿಂತಿರುಗಿ ಅಲ್ಲಿಯೇ ಇರುವಂತೆ ಕೇಳಿಕೊಳ್ಳಲಾಗಿತ್ತು. ಸ್ಥಳೀಯ ಅಧಿಕಾರಿಗಳು ಸೋನು ಸೂದ್ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ಹೋಗುತ್ತಿದ್ದಾರೆ ಎಂದು ಹೇಳಿ ದೂರಿದ್ದರು. ಹಾಗಾಗಿ ಅವರನ್ನು ತಮ್ಮ ಮನೆಯಲ್ಲಿಯೇ ಇರುವಂತೆ ಹೇಳಲಾಗಿತ್ತು.
PublicNext
22/02/2022 09:36 am