ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ರೇಜಿ ಸ್ಟಾರ್ ರವಿಚಂದ್ರನ್‌ ತಾಯಿ ಪಟ್ಟಮ್ಮಾಳ್‌ ಇನ್ನಿಲ್ಲ

ಬೆಂಗಳೂರು: ಕ್ರೇಜಿ ಸ್ಟಾರ್ ರವಿಚಂದ್ರನ್‌ ಅವರ ತಾಯಿ ಶ್ರೀಮತಿ ಪಟ್ಟಮ್ಮಾಳ್‌ ವೀರಾಸ್ವಾಮಿ ಅವರು ಇಂದು ಬೆಳಿಗ್ಗೆ 6.30ಕ್ಕೆ ನಿಧನಹೊಂದಿದ್ದಾರೆ.

83 ವಯಸ್ಸಿನ ಪಟ್ಟಮ್ಮಾಳ್‌ ಅವರಿಗೆ ರವಿಚಂದ್ರನ್‌, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್‌ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 10.30ರ ನಂತರ ಮನೆಗೆ ಕರೆತಂದು ಸಂಜೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ರವಿಚಂದ್ರನ್‌ ತಿಳಿಸಿದ್ದಾರೆ.

Edited By :
PublicNext

PublicNext

28/02/2022 09:56 am

Cinque Terre

59.18 K

Cinque Terre

35

ಸಂಬಂಧಿತ ಸುದ್ದಿ