ಭೋಪಾಲ್: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯ ಆಧಾರಿತ ನಿರ್ಮಾಣಗೊಂಡಿರುವ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಣೆಗೆ ಮಧ್ಯಪ್ರದೇಶದ ಪೊಲೀಸರಿಗೆ ರಜೆ ಘೋಷಣೆ ಮಾಡಲಾಗಿದೆ.
'ದಿ ಕಾಶ್ಮೀರ್ ಫೈಲ್ಸ್' ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯ್ತಿ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಿನ್ನೆಯಷ್ಟೇ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ, ಸಿನಿಮಾ ವೀಕ್ಷಣೆ ಮಾಡಲು ರಾಜ್ಯದ ಪೊಲೀಸರಿಗೆ ರಜೆ ನೀಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಈಗಾಗಲೇ 'ದಿ ಕಾಶ್ಮೀರ್ ಫೈಲ್ಸ್' ಚಿತ್ರಕ್ಕೆ ತೆರಿಗೆ ವಿನಾಯತಿ ನೀಡಿವೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಮಧ್ಯಪ್ರದೇಶ ಸರ್ಕಾರ, ಚಿತ್ರ ವೀಕ್ಷಣೆ ಮಾಡಲು ಅಲ್ಲಿನ ಪೊಲೀಸರಿಗೆ ರಜೆ ಘೋಷಣೆ ಮಾಡಿದೆ.
PublicNext
14/03/2022 05:22 pm