‘ದಿ ಕಾಶ್ಮೀರ್ ಫೈಲ್ಸ್’ ದೇಶದಲ್ಲೆಡೆ ಸಂಚಲನ ಸೃಷ್ಟಿಸಿದೆ. ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರವನ್ನು ನೋಡಿದ ಬಳಿಕ ನಟಿ ಕಂಗನಾ ರಣಾವತ್ ಬಾಲಿವುಡ್ ಮೇಲೆ ಕಿಡಿಕಾರಿದ್ದಾರೆ.
ಕೊರೊನಾ ನಂತರ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿ ದೇಶಕ್ಕೆ ದೇಶವೇ ಸಿನಿಮಾವನ್ನು ಕೊಂಡಾಡುತ್ತಿದೆ. ಆದರೆ ಬಾಲಿವುಡ್ ಮೌನ ತಾಳಿದೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾಲಿವುಡ್ ಕೆಲವರಿಗೆ ಹಿಡಿಸಿದಂತೆ ಕಾಣುತ್ತಿಲ್ಲ. ಇಂತಹ ಚಿತ್ರಗಳ ಬಗ್ಗೆ ಅವರಿಗೆ ಯಾವಾಗಲೂ ತಾತ್ಸಾರ.
ಇಂತಹ ಚಿತ್ರಗಳನ್ನು ಎಲ್ಲರಿಗೂ ತಲುಪಿಸಲು ಬಾಲಿವುಡ್ ಏಕೆ ಯೋಚಿಸುತ್ತಿಲ್ಲ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕಾಶ್ಮೀರ ಪಂಡಿತರ ಹತ್ಯ ಮತ್ತು ಅವರ ವಲಸೆ ಕುರಿತಾದ ಸಿನಿಮಾ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೊತೆಗೆ ವಿರೋಧವೂ ವ್ಯಕ್ತವಾಗಿದೆ.
PublicNext
15/03/2022 04:14 pm