ಮುಂಬೈ: ದೇಶಾದ್ಯಂತ ಸಂಚಲನ ಮೂಡಿಸಿರುವ 'ದಿ ಕಾಶ್ಮೀರಿ ಫೈಲ್ಸ್' ಸಿನಿಮಾ ಬಾಕ್ಸ್ ಆಫೀಸ್ನಲ್ಲೂ ದೂಳೆಬ್ಬಿಸಿದ್ದು, ಬಿಡುಗಡೆಯಾಗಿ ಕೇವಲ 5 ದಿನಗಳಲ್ಲೇ 60 ಕೋಟಿ ರೂ. ಗಳಿಸಿದೆ.
'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಇಡೀ ದೇಶದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ದೇಶದ ಮುಕುಟ ಕಾಶ್ಮೀರದ ಪಂಡಿತರ ಕತೆಯನ್ನು ಈ ಚಿತ್ರ ಹೊಂದಿದೆ. ಈ ಚಿತ್ರ ವೀಕ್ಷಿಸುವವರಿಗೆ ಕರ್ನಾಟಕ, ರಾಜಸ್ಥಾನ, ಗೋವಾ, ಉತ್ತರ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳು ಈಗಾಗಲೇ ತೆರಿಗೆ ವಿನಾಯಿತಿಯನ್ನೂ ಘೋಷಣೆ ಮಾಡಿವೆ. ಒಟ್ಟಾರೆ, ಈ ಚಿತ್ರ ದೇಶದಲ್ಲಿ ಸದ್ದು ಮಾಡುತ್ತಿರುವುದಂತೂ ಸುಳ್ಳಲ್ಲ.
ಬಿಡುಗಡೆಯಾದ ಮೊದಲ ದಿನ ಕೇವಲ 3.55 ಕೋಟಿ ರೂ. ಗಳಿಕೆ ಮಾಡಿದ್ದ ಈ ಚಿತ್ರವು ಎರಡನೇ ದಿನ 8.50 ಕೋಟಿ ರೂ. ಸಂಗ್ರಹಿಸಿದೆ. ಇದಾದ ಬಳಿಕ ಸೋಮವಾರ ಮತ್ತು ಮಂಗಳವಾರ ಕ್ರಮವಾಗಿ 15.10 ಕೋಟಿ ರೂ. ಮತ್ತು 15.02 ಕೋಟಿ ರೂ. ಗಳಿಸಿದೆ. ನಿನ್ನೆ ಕೂಡ 18 ಕೋಟಿ ರೂ. ಗಳಿಸಿರುವ ಚಿತ್ರ ಈಗಾಗಲೇ 50 ಕೋಟಿ ರೂ. ಕ್ಲಬ್ ಸೇರಿದ್ದು, ಮುಂದಿನ ಕೆಲ ದಿನಗಳಲ್ಲಿ 100 ಕೋಟಿ ರೂ. ಗಳಿಸುವತ್ತ ಸಾಗುತ್ತಿದೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರದಲ್ಲಿ ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪ್ರಕಾಶ್ ಬೆಳವಡಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಇನ್ನು ಚಿತ್ರ ವೀಕ್ಷಿಸಿರುವ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರತಿಯೊಬ್ಬರೂ ಚಿತ್ರ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.
PublicNext
16/03/2022 05:22 pm