ದಾವಣಗೆರೆ: ಬಹುನಿರೀಕ್ಷಿತ ಚಿತ್ರ ಆರ್ ಆರ್ ಆರ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಜಗಳೂರಿನಲ್ಲಿ ಸಿನಿಮಾ ಪ್ರದರ್ಶನ ರದ್ದುಗೊಳಿಸಿದ್ದರಿಂದ ಪ್ರೇಕ್ಷಕರು ರೊಚ್ಚಿಗೆದ್ದ ಘಟನೆ ನಡೆದಿದೆ. ಸಿನಿಮಾ ಥಿಯೇಟರ್ ನ ಗ್ಲಾಸ್ ಪೀಸ್ ಪೀಸ್ ಆಗಿವೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರ್ ಆರ್. ಆರ್ ಸಿನಿಮಾದ ಹವಾ ಸೃಷ್ಟಿಸಿದೆ. ದೊಡ್ಡಮಟ್ಟದಾಗಿ ಹೆಸರು ಮಾಡುತ್ತಿದೆ. ಅಭಿಮಾನಿಗಳು ಎಲ್ಲೆಡೆ ದೊಡ್ಡ ದೊಡ್ಡ ಕಟೌಟ್ ಗಳಿಗೆ ಹಾಲಿನ ಅಭಿಷೇಕ ಸೇರಿದಂತೆ ಥಿಯೇಟರ್ ಗಳ ಮುಂದೆ ಕುಣಿದು ಕುಪ್ಪಳಿಸಿದ್ದಾರೆ. ಆದರೆ ದಾವಣಗೆರೆ ಜಿಲ್ಲೆ ಜಗಳೂರಿನ ಭಾರತ್ ಚಿತ್ರಮಂದಿರದಲ್ಲಿ ಬೆಳಿಗ್ಗೆಯಿಂದ ಎರಡು ಶೋ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿತ್ತು. ಮೂರನೇ ಶೋ ಪ್ರದರ್ಶನದ ವೇಳೆ ತಾಂತ್ರಿಕ ಸಮಸ್ಯೆಯಿಂದ ವಿಡಿಯೋ ಕಟ್ ಕಟ್ ಆಗುವುದಲ್ಲದೇ ಸೌಂಡ್ ಎಫೆಕ್ಟ್ ಬಾರದಿರುವುದಕ್ಕೆ ಅಭಿಮಾನಿಗಳು ಸಿಟ್ಟಿಗೆದ್ದರು.
PublicNext
26/03/2022 03:45 pm