ಯಶ್ ಅಭಿನಯದ ಬಹುನೀರಿಕ್ಷಿತ ಚಿತ್ರ 'ಕೆಜಿಎಫ್ 2' ಸಿನಿಮಾದ ಹವಾ ಜೋರಾಗಿದೆ. ಏಪ್ರಿಲ್ 14 ರಂದು ಚಿತ್ರ ತೆರೆಕಾಣಲಿದೆ. ಇನ್ನು ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿ ರಸಿಕರು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.ಸದ್ಯ 'ಕೆಜಿಎಫ್ 2' ಸಿನಿಮಾ ಬಿಡುಗಡೆಗೆ ಇನ್ನು ಏಳು ದಿನವಷ್ಟೆ ಬಾಕಿ ಇದ್ದು, ಈಗಾಗಲೇ ಕೆಲವು ರಾಜ್ಯಗಳಲ್ಲಿ ಸಿನಿಮಾದ ಟಿಕೆಟ್ ಬುಕಿಂಗ್ ಶುರುವಾಗಿದೆ ಆಗಿದೆ.
ಸದ್ಯ ಕರ್ನಾಟಕದಲ್ಲಿ ಏಪ್ರಿಲ್ 10 ರಂದು ಬುಕಿಂಗ್ ಪ್ರಾರಂಭಗೊಳ್ಳಲಿದೆ. ಸಿನಿಮಾ ಬಿಡುಗಡೆಗೆ ಮೂರು ದಿನ ಮುಂಚಿತವಾಗಿ ಕರ್ನಾಟಕದಲ್ಲಿ ಬುಕ್ ಮೈ ಶೋ, ಪೇಟಿಎಂ ಬಳಸಿ ಟಿಕೆಟ್ ಬುಕಿಂಗ್ ಮಾಡಿಕೊಳ್ಳಬಹುದಾಗಿರುತ್ತದೆ. 'ಕೆಜಿಎಫ್ 2' ಸಿನಿಮಾ ವಿಶ್ವದಾದ್ಯಂತ ಸುಮಾರು 6000 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ.
PublicNext
07/04/2022 06:26 pm