ಭಾರತದ ಮೂಲೆ ಮೂಲೆಯಲ್ಲೂ 'ಕೆಜಿಎಫ್: ಚಾಪ್ಟರ್ 2' ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. 'ಕೆಜಿಎಫ್-2' ಚಿತ್ರವನ್ನು ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಏಪ್ರಿಲ್ 14 ರಂದು ‘ಕೆಜಿಎಫ್-2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ.
ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
PublicNext
11/04/2022 09:10 pm