ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ

ದಿ. ನಟ ಪುನೀತ್ ರಾಜ್ ಕುಮಾರ್ ಅವರಿಗೆ ಚಿತ್ರದುರ್ಗದ ಮುರುಘಾಮಠ ನೀಡುವ ಬಸವಶ್ರೀ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಮುರಾಘಮಠದ ಅನುಭವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಐದು ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುವ ಈ ಪ್ರಶಸ್ತಿಯನ್ನು ಈಗಾಗಲೇ ಹಲವು ಗಣ್ಯರಿಗೆ ನೀಡಲಾಗಿದೆ. ಸಿನಿಮಾ ಕ್ಷೇತ್ರದ ಸಾಧನೆಗಾಗಿ ಇದೇ ಮೊದಲು ನಟರೊಬ್ಬರಿಗೆ ಈ ಪ್ರಶಸ್ತಿ ಸಂದಿರುವುದು ವಿಶೇಷ. ಪ್ರಶಸ್ತಿ ಪಡೆಯುವ ವೇಳೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಭಾವುಕರಾದರು. ಬಳಿಕ ಮುರುಘಾಮಠಕ್ಕೆ ಧನ್ಯವಾದ ಅರ್ಪಿಸಿದರು.

Edited By : Nirmala Aralikatti
PublicNext

PublicNext

03/05/2022 03:44 pm

Cinque Terre

55.07 K

Cinque Terre

3