ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ ದಿ.ಎಂ.ಪಿ ಶಂಕರ್ ಪತ್ನಿ ಮಂಜುಳಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ದಿ.ಎಂ.ಪಿ ಶಂಕರ್ ಪತ್ನಿ ಮಂಜುಳಾ ಶಂಕರ್ ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಸಂಬಂಧಿ ಕಾಯಿಲೆ ಕಾರಣದಿಂದಾಗಿ ಆಂಜಿಯೋಗ್ರಾಮ್ ಕೂಡ ಮಾಡಲಾಗಿತ್ತು. ದಿಢೀರನೇ ಮತ್ತೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Edited By : Nagaraj Tulugeri
PublicNext

PublicNext

11/05/2022 10:57 am

Cinque Terre

42.5 K

Cinque Terre

1

ಸಂಬಂಧಿತ ಸುದ್ದಿ