ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಒಂದು ಕಡೆ ಗಲ್ರಾನಿ ತಂಗಿ ಹಸೆಮಣೆ ಏರಿದ ಸಂಭ್ರಮ ಮೊತ್ತೊಂದು ಕಡೆ ಗಂಡು ಮಗುವಿಗೆ ಜನ್ಮ ನೀಡಿದ ಸಂಜನಾ ಇದು ನಟಿ ಮನೆಯಲ್ಲಿ ಸಂಭ್ರಮವನ್ನು ತಂದಿದೆ.
`ಗಂಡ ಹೆಂಡತಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಸಂಜನಾ ಗಲ್ರಾನಿ, ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಅಜೀಜ್ ಪಾಷಾ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇತ್ತೀಚೆಗಷ್ಟೇ ಬೇಬಿ ಬಂಪ್ ಫೋಟೋಶೂಟ್, ಸೀಮಂತ ಶಾಸ್ತ್ರದ ವಿಚಾರವಾಗಿ ಸುದ್ದಿಯಾಗಿದ್ದ ನಟಿ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ.
PublicNext
19/05/2022 06:58 pm