ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ಡೇಟ್ ಫಿಕ್ಸ್ ಆಗಿದ್ದು, ನಗರದ ಹೆಸರಾಂತ ದೇವಸ್ಥಾನದಲ್ಲಿಯೇ ಈ ಚಿತ್ರದ ಮುಹೂರ್ತ ನಡೆಯಲಿದೆ.
ಜೂನ್-3 ರಂದು ಇಲ್ಲಿಯ ಲಕ್ಕಿ ದೇವಸ್ಥಾನವೆಂದೇ ಕರೆಯಲ್ಪಡುವ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿಯೇ ಉಪ್ಪಿಯ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ.
ಬೆಳಗ್ಗೆ 9.15 ರ ಸುಮಾರಿಗೆ ಚಿತ್ರಕ್ಕೆ ಮುಹೂರ್ತ ನಡೆಯತ್ತಿದ್ದು, ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ವಿಶೇಷವಾಗಿಯೇ ಇನ್ವಿಟೇಷನ್ ಮಾಡಿಸಲಾಗಿದೆ. ಈ ವಿಚಾರವನ್ನ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಹಂಚಿಕೊಂಡಿದ್ದಾರೆ.
-ರೇವನ್ ಪಿ.ಜೇವೂರ್,ಎಂಟರಟೈನಮೆಂಟ್ ಬ್ಯೂರೋ,ಪಬ್ಲಿಕ್ ನೆಕ್ಸ್ಟ್
PublicNext
30/05/2022 10:01 am