ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಬೈ: ಗಾಯಕ, ತಂದೆ ಕೆಕೆ ಅಂತ್ಯಕ್ರಿಯೆ ನೆರವೇರಿಸಿದ ಪುತ್ರ ನಕುಲ್

ಮುಂಬೈ: ಕೋಲ್ಕತ್ತಾದಲ್ಲಿ ಮಂಗಳವಾರ ಹಠಾತ್ ನಿಧನರಾದ ಗಾಯಕ ಕೃಷ್ಣ ಕುಮಾರ್ ಕುನ್ನತ್ (ಕೆಕೆ) ಅವರ ಅಂತ್ಯಕ್ರಿಯೆಯನ್ನು ಮುಂಬೈನ ಅಂಧೇರಿಯಲ್ಲಿರುವ ವರ್ಸೋವಾ ಹಿಂದೂ ಸ್ಮಶಾನದಲ್ಲಿ ಗುರುವಾರ ನೆರವೇರಿಸಲಾಯಿತು. ಕೆಕೆ ಪುತ್ರ ನಕುಲ್ ತಂದೆಯ ಅಂತಿಮ ಸಂಸ್ಕಾರ ನೆರವೇರಿಸಿದರು.

'ಕೃಷ್ಣಕುಮಾರ್ ಕುನ್ನತ್ ಅವರು ಕೋಲ್ಕತ್ತದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸುಮಾರು ಒಂದು ಗಂಟೆ ಕಾಲ ಹಾಡಿದ್ದರು. ಆದರೆ, ಹೋಟೆಲ್‌ ತಲುಪಿದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದರು' ಎಂದು ಅಧಿಕಾರಿಗಳು ನಿನ್ನೆ ಮಾಹಿತಿ ನೀಡಿದ್ದರು.

ಕೃಷ್ಣಕುಮಾರ್ ಕುನ್ನತ್ ಅವರು ಕನ್ನಡ, ತಮಿಳು, ತೆಲುಗು, ಮಲಯಾಳ, ಮರಾಠಿ, ಬೆಂಗಾಲಿ ಭಾಷೆಗಳಲ್ಲೂ ಹಾಡಿದ್ದಾರೆ. ಅವರು ‘ಕೆಕೆ’ ಎಂದೇ ಖ್ಯಾತರಾಗಿದ್ದರು.

Edited By : Vijay Kumar
PublicNext

PublicNext

02/06/2022 03:10 pm

Cinque Terre

25.38 K

Cinque Terre

0

ಸಂಬಂಧಿತ ಸುದ್ದಿ