ಬಾಲಿವುಡ್‌ನಿಂದ ಅಂತರ ಕಾಯ್ದುಕೊಂಡಿರುವ ನಟಿ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪತಿ, ಮಗು, ಸಿನಿಮಾ ಅಂತ ಬ್ಯುಸಿಯಾಗಿರುವ ಪ್ರಿಯಾಂಕಾ ಇತ್ತೀಚಿಗಷ್ಟೆ ಪ್ಯಾರಿಸ್ ಈವೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.
ಈವೆಂಟ್ನಲ್ಲಿ ಗೋಲ್ಡನ್ ಕಲರ್ ಗೌನ್‌ನಲ್ಲಿ ಪ್ರಿಯಾಂಕಾ ಚೋಪ್ರಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ಹೊಸ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಅಮೆರಿಕನ್ ನಟಿಯರಾದ ಆನ್ನೆ ಹ್ಯಾಥ್‌ವೇ ಮತ್ತು ಲೀಸಾ ಜೊತೆ ಒಳ್ಳೆಯ ಸಮಯ ಕಳೆದಿದ್ದಾರೆ. ನಟಿ ಪ್ರಿಯಾಂಕಾ ಧರಿಸಿದ್ದ ಗೋಲ್ಡನ್ ಕಲರ್ ಗೌನ್ ಬೆಲೆ 2520 ಡಾಲರ್ (1.7 ಲಕ್ಷ ರೂ) ಎಂದು ಹೇಳಲಾಗಿದೆ.
PublicNext
08/06/2022 11:28 am