ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಸಿನಿಮಾ 'ಕ್ರಾಂತಿ' ಈಗಾಗಲೇ ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಕೂಡ ರಿಲೀಸ್ ಆಗಿದೆ. ಚಿತ್ರದಲ್ಲಿ ದರ್ಶನ್ ಯಾವ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಟೀಸರ್‌ನಲ್ಲಿ ರಿವೀಲ್ ಆಗಿದೆ.
'ಕ್ರಾಂತಿ' ಚಿತ್ರ ಬಹುತೇಕ ಶೂಟಿಂಗ್ ಮುಕ್ತಾಯವಾಗಿದೆ. ಇನ್ನೇನಿದ್ದರೂ ಸಿನಿಮಾದ ಪ್ಯಾಚ್ ವರ್ಕ್ ಮಾತ್ರ ಬಾಕಿ ಇದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಸಿನಿಮಾ ತಂಡ ನಿರತವಾಗಿದೆ. ಜೊತೆಗೆ ಆದಷ್ಟು ಬೇಗ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಕೂಡ ಹಾಕಿಕೊಂಡಿದೆ. ಹಾಗಾಗಿ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ವೇಗವಾಗಿ ಸಾಗುತ್ತಿವೆ.
ಯಾಕೆಂದರೆ ಸಿನಿಮಾ ಇದೇ ವರ್ಷ ನವೆಂಬರ್‌ನಲ್ಲಿ ತೆರೆ ಕಾಣಲಿದೆ. ಈ ಬಗ್ಗೆ ಸದ್ಯಲ್ಲೇ ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದ್ದು, ಟ್ರೈಲರ್ ಕೂಡ ರಿಲೀಸ್ ಆಗಲಿದೆ.
PublicNext
16/06/2022 02:39 pm