ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ 'ಜೇಮ್ಸ್' ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯ ಬಡಿತದಲ್ಲಿ ವ್ಯತ್ಯಾಸ ಆಗಿದೆ ಎಂಬ ಮಾಹಿತಿ ಕೇಳಿಬಂದಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಸೋಮವಾರ (ಜುಲೈ 4) ರಾತ್ರಿ ಕಿಶೋರ್ ಪತ್ತಿಕೊಂಡ ಅವರು ಪ್ರಜ್ಞೆ ತಪ್ಪಿ ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅವರ ಕುಟುಂಬದವರು ಕೂಡ ರಾತ್ರಿಯಿಂದಲೇ ಬೆಂಗಳೂರಿನ ಶೇಷಾದ್ರಿಪುರದಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಆಗಿದೆ ಎನ್ನಲಾಗುತ್ತಿದ್ದು, ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
PublicNext
05/07/2022 04:19 pm