ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮಗ ವಿನೀಶ್ ಮತ್ತು ಪತ್ನಿ ವಿಜಯಲಕ್ಷ್ಮೀ ಜೊತೆಗೆ ಲಂಡನ್ ಪ್ರವಾಸ ಕೈಗೊಂಡಿದ್ದಾರೆ. ಈ ಸಂಬಂಧ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.
ಲಂಡನ್‌ಗೆ ಹೋಗುವ ಮುನ್ನ ದರ್ಶನ್ ಜೊತೆಗೆ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಟ ದರ್ಶನ್ ಜೀನ್ಸ್, ಟೀಶರ್ಟ್ ತೊಟ್ಟು ಮಿಂಚಿದರೆ, ವಿಜಯಲಕ್ಷ್ಮಿ ಹಸಿರು ಬಣ್ಣದ ಜಾಗರ್ ತೊಟ್ಟುಕೊಂಡಿದ್ದರು. ಇನ್ನು ವಿಜಯಲಕ್ಷ್ಮಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಲಂಡನ್ ಫೋಟೊ ಹಂಚಿಕೊಂಡಿದ್ದಾರೆ. ಸದ್ಯ ದರ್ಶನ್ ಸಿನಿಮಾದಿಂದ ಕೊಂಚ ಬಿಡುವು ಮಾಡಿಕೊಂಡು ಕುಟುಂಬದ ಜೊತೆಗೆ ಹಾಲಿ ಡೇ ಎಂಜಾಯ್ ಮಾಡ್ತಿದ್ದಾರೆ.
PublicNext
18/07/2022 09:14 am