ಬೆಂಗಳೂರು: ನಟ ಅರ್ಜುನ್ ಸರ್ಜಾರ ತಾಯಿ, ಧ್ರುವ ಸರ್ಜಾ ಅವರ ಅಜ್ಜಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷಗಳಾಗಿತ್ತು. ಲಕ್ಷ್ಮೀದೇವಿ ಅವರನ್ನ ಕಳೆದ 22 ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.
ನಟ ಅರ್ಜುನ್ ಸರ್ಜಾ ತಾಯಿ ಹಾಗೂ ನಟ ದ್ರುವ ಸರ್ಜಾ ಅವರ ಅಜ್ಜಿ ಲಕ್ಷ್ಮಿದೇವಮ್ಮ ಅವರ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ಥಿವ ಶರೀರವನ್ನು ಜಯನಗರದ ಅಪೋಲೋ ಆಸ್ಪತ್ರೆಯಿಂದ ಅರ್ಜುನ್ ಸರ್ಜಾ ಅವರ ನಿವಾಸಕ್ಕೆ ಶಿಫ್ಟ್ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
PublicNext
23/07/2022 02:59 pm