ಭೀಮನ ಅಮವಾಸ್ಯೆ ಹಿನ್ನಲೆಯಲ್ಲಿ ಇಂದು ಬಹುಭಾಷಾ ನಟಿ ಪ್ರಣಿತಾ ಸುಭಾಷ್ ತನ್ನ ಪತಿಗೆ ವಿಶೇಚವಾಗಿ ಪಾದಪೂಜೆ ಮಾಡಿದ್ದಾರೆ.
ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಪ್ರಣಿತಾ ಮಗುವಿನ ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಪತಿಯ ರಕ್ಷಣೆಗಾಗಿ ಪೂಜೆ ಮಾಡುತ್ತಾ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ ವರ್ಷ ಉದ್ಯಮಿ ನಿತಿನ್ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀನ ಭೀಮನ ಅಮವಾಸ್ಯೆಯನ್ನ ಮತ್ತಷ್ಟು ವಿಶೇಷವಾಗಿ ಆಚರಿಸಿದ್ದಾರೆ. ಈ ವಿಶೇಷ ದಿನದಂದು ಪತಿಯ ಪಾದ ಪೂಜೆ ಮಾಡಿ, ಆರ್ಶೀವಾದ ಪಡೆದುಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
PublicNext
28/07/2022 08:53 pm