'ಕೆಜಿಎಫ್' ಸರಣಿ ಸಿನಿಮಾದ ನಿರ್ದೇಶಕ ಪ್ರಶಾಂತ್ ನೀಲ್ ಅವರು ಆ್ಯಕ್ಷನ್ ಕಟ್ ಹೇಳುತ್ತಿರುವ, ಪ್ರಭಾಸ್ ನಟನೆಯ 'ಸಲಾರ್' ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಹೌದು. ಸಲಾರ್ ಸಿನಿಮಾ 2023ರ ಸೆಪ್ಟೆಂಬರ್ 28ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ. ಕೆಜಿಎಫ್ ಚಾಪ್ಟರ್ 1 ಹಾಗೂ 2ನ್ನು ನಿರ್ಮಾಣ ಮಾಡಿದ್ದ ವಿಜಯ್ ಕಿರಗಂದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಡಿ ಸಲಾರ್ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ಅದ್ಧೂರಿತನದ ವಿಚಾರದಲ್ಲಿ ಕೆಜಿಎಫ್ ಚಾಪ್ಟರ್-2 ಮೀರಿಸುವಂತಿದೆ ಸಲಾರ್. ₹400 ಕೋಟಿಗೂ ಮೀರಿದ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.
PublicNext
16/08/2022 03:19 pm