ನಟ ಅಭಿಷೇಕ್ ಅಂಬರೀಶ್ ಅಭಿನಯದ ಹೊಸ ಸಿನಿಮಾ ಪೋಸ್ಟರ್ ಬಿಡುಗಡೆಯಾಗಿದೆ. ಹೌದು ಹಿರಿಯ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಹೊಸ ಸಿನಿಮಾ ಪೋಸ್ಟರ್ ರಿಲೀಸ್ ಮಾಡಲಾಗಿದೆ. ವಾರಿಯರ್ ಲುಕ್ ನಲ್ಲಿ ಕಾಣಿಸಿಕೊಂಡಿರೋ ಅಭಿಷೇಕ್ ಹೊಸ ಚಿತ್ರದ ಪೋಸ್ಟರ್ ಅಭಿಮಾನಿಗಳಲ್ಲಿ ಕೂತುಹಲ ಮೂಡಿಸಿದೆ.
ಮಹೇಶ್ ಕುಮಾರ್ ಅವರು ಇದೀಗ ಅಭಿಷೇಕ್ ಅವರ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇನ್ನು ರೆಬಲ್ ಸ್ಟಾರ್ ಅಂಬರೀಶ್ ಅವರ ಸಮಾಧಿ ಆವರಣದಲ್ಲೇ ಅಭಿಷೇಕ್ ಅಂಬರೀಶ್ ಅವರ 4ನೇ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹಾಕಿದ್ದಾರೆ.
ದುನಿಯಾ ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಮಾಡ್ತಿರೋ ಅಭಿಷೇಕ್ ತನ್ನ 4ನೇ ಚಿತ್ರಕಕ್ಕೂ ರುಜು ಹಾಕಿದ್ದಾರೆ.
ಈ ಚಿತ್ರಕ್ಕೆ ‘AA04’ ಹೆಸರಿಟ್ಟು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸದ್ಯ ರಿಲೀಸ್ ಆಗಿರೋ ಹೊಸ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
PublicNext
27/08/2022 08:13 pm