ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ಸೈಮಾ’ ಸಮಾರಂಭಕ್ಕೆ ಬಂದಿದ್ದ ರಣವೀರ್ ಸಿಂಗ್‌ಗೆ ಕಪಾಳಮೋಕ್ಷ!

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ‘ಸೈಮಾ’ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಚಿತ್ರರಂಗದ ನಟ-ನಟಿಯರು, ನಿರ್ಮಾಪಕರು-ನಿರ್ದೇಶಕರು ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ.ಪುನೀತ್ ರಾಜ್‍ ಕುಮಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.

ವರದಿಗಳ ಪ್ರಕಾರ ‘ಸೈಮಾ’ ಕಾರ್ಯಕ್ರಮದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನಟ ರಣವೀರ್ ಸಿಂಗ್ ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದರು.

ಈ ವೇಳೆ ತಮ್ಮ ನೆಚ್ಚಿನ ನಟನ ಜೊತೆಗೆ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದರು. ಈ ಸಂದರ್ಭದಲ್ಲಿ ತಳ್ಳಾಟ-ನೂಕಾಟ ನಡೆದು ಆಕಸ್ಮಿಕವಾಗಿ ರಣವೀರ್ ಸಿಂಗ್ ಕೆನ್ನೆಗೆ ಏಟು ಬಿದ್ದಿದೆ ಎನ್ನಲಾಗಿದೆ. ರೆಡ್ ಕಾರ್ಪೆಟ್ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

Edited By : Abhishek Kamoji
PublicNext

PublicNext

13/09/2022 01:35 pm

Cinque Terre

88.42 K

Cinque Terre

2