ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುದ್ಧಿವಂತನ ಜನ್ಮದಿದಂದು "ಕಬ್ಜ" ಸಿನಿಮಾ ಟೀಸರ್ ಅಭಿಮಾನಿಗಳಿಗೆ ಕಾತುರ

ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ ನಿಗದಿಯಾಗಿದೆ. ಚಿತ್ರದ ನಾಯಕ ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ "ಕಬ್ಜ" ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.

ಕನ್ನಡಿಗರ ಹೆಮ್ಮೆಯ "ಕೆ.ಜಿ.ಎಫ್ 2" ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ‌. ಕನ್ನಡಿಗರ ಮತ್ತೊಂದು ಹೆಮ್ಮೆಯ "ಕಬ್ಜ" ಚಿತ್ರ ಕೂಡ ಗೆಲ್ಲಲೇಬೇಕು. ಚಿತ್ರತಂಡದ ಅಪಾರ ಶ್ರಮದಿಂದ ನಿರ್ಮಾಣವಾಗಿರುವ "ಕಬ್ಜ" ಚಿತ್ರ ಗೆದ್ದರೆ ಕನ್ನಡ ಚಿತ್ರ ಗೆದ್ದಂತೆ. ಈ ಚಿತ್ರ ಗೆದ್ದರೆ ಮತ್ತೊಮ್ಮೆ ಸ್ಯಾಂಡಲ್‌ವುಡ್‌ನಲ್ಲಿ ನಾವೇ ನಂಬರ್ ಒನ್ ಆಗಲಿದ್ದೇವೆ ಎನ್ನುತ್ತಿರುವ ಕನ್ನಡ ಕಲಾಭಿಮಾನಿಗಳು, "ಕಬ್ಜ" ಪ್ಯಾನ್ ಇಂಡಿಯಾ ಚಿತ್ರ ಪ್ರಪಂಚದಾದ್ಯಂತ ಪ್ರಚಂಡ ಯಶಸ್ಸು ಸಾಧಿಸಲಿ ಎಂದು ತುಂಬು ಮನಸ್ಸಿನಿಂದ ಹಾರೈಸುತ್ತಿದ್ದಾರೆ.

ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸೆಪ್ಟೆಂಬರ್ ಹದಿನೇಳರಂದು ಟೀಸರ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.

Edited By : Abhishek Kamoji
PublicNext

PublicNext

14/09/2022 05:11 pm

Cinque Terre

32.85 K

Cinque Terre

0