ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೆಂಬರ್ 11 ರಂದು ರಾಜ್ಯಾದ್ಯಂತ "ರಾಣ"ನ ಆಗಮನ.

ಕೆ.ಮಂಜು ಅರ್ಪಿಸುವ, ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ನಿರ್ಮಿಸಿರುವ, ನಂದಕಿಶೋರ್ ನಿರ್ದೇಶನದಲ್ಲಿ

ಶ್ರೇಯಸ್ ಕೆ ಮಂಜು ನಾಯಕನಾಗಿ ‌ಅಭಿನಯಿಸಿರುವ "ರಾಣ" ಚಿತ್ರ ನವೆಂಬರ್ 11 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‌ರೀಷ್ಮಾ ನಾಣಯ್ಯ ಈ ಚಿತ್ರದ ನಾಯಕಿ. ರಜನಿ ಭಾರದ್ವಾಜ್, ಅಶೋಕ್, ಗಿರಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್ ಕುಮಾರ್, ನಯನ, ರಘು, ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ರವಿವರ್ಮ, ಚೇತನ್,ಡಿಸೋಜ ಡಿಫರೆಂಟ್ ಡ್ಯಾನಿ ಹಾಗೂ ಗಣೇಶ್ ಸಾಹಸ ಸಂಯೋಜನೆ ಮಾಡಿದ್ದಾರೆ.

ಚಿತ್ರದಲ್ಲಿ ಮೂರು ಹಾಡುಗಳಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಇಮ್ರಾನ್ ಸರ್ದಾರಿಯಾ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.

Edited By :
PublicNext

PublicNext

16/09/2022 01:28 pm

Cinque Terre

24.55 K

Cinque Terre

0

ಸಂಬಂಧಿತ ಸುದ್ದಿ