ರಿಯಲ್ ಸ್ಟಾರ್ ಉಪೇಂದ್ರ ಹುಟ್ಟು ಹಬ್ಬಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಆರ್ ಚಂದ್ರು ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಕಬ್ಜ ಟೀಸರ್ ಬಿಡುಗಡೆಯಾಗಿದೆ. ಕನ್ನಡದ ಬಹುನಿರೀಕ್ಷಿತ ಸಿನಿಮಾ, ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ' ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಸಿನಿಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ 'ಕಬ್ಜ' ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಅಭಿಮಾನಿಗಳು ಖುಷ್ ಆಗಿದ್ದಾರೆ.
ಆರ್. ಚಂದ್ರು ನಿರ್ದೇಶನ ಮಾಡುತ್ತಿರುವ ಕಬ್ಜ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಿಟ್ಟಿದ್ದಾರೆ. ಪೋಸ್ಟರ್ ಹಾಗೂ ಫಸ್ಟ್ ಲುಕ್ ಮೂಲಕ ಎಲ್ಲರ ಗಮನ ಸೆಳೆದ ಕಬ್ಜ ಸಿನಿಮಾದ ಟೀಸರ ಇದೀಗ ಬಿಡುಗಡೆಯಾಗಿದೆ. ಕಬ್ಜ ಚಿತ್ರದಲ್ಲಿ ಉಪೇಂದ್ರ ಹೀರೋ ಆಗಿದ್ದು, ಅವರ ಜೊತೆ ಕಿಚ್ಚ ಸುದೀಪ್ ಕೂಡ ನಟಿಸಿದ್ದಾರೆ. ಕಬ್ಜದಲ್ಲಿ ನಾಯಕಿ ನಟಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದ ಟೀಸರ್ ಇಂದು (ಸೆ.17) ಸಂಜೆ ರಿಲೀಸ್ ಆಗಿದೆ. ಕಬ್ಜ ಒಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡದ ಜೊತೆ ತೆಲುಗು, ಮಲಯಾಳಂ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.
ಕಬ್ಜ ಸಿನಿಮಾ ಟೀಸರ್ ರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಓರಾಯನ್ ಮಾಲ್‌ನಲ್ಲಿ ನಡೆದಿದ್ದು, ತೆಲುಗಿನ ಖ್ಯಾತ ನಟ ರಾಣಾ ದುಗ್ಗುಬಾಟಿ ಮತ್ತು ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಮುಖ್ಯ ಅತಿಥಿಗಳಾಗಿ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಐದು ಭಾಷೆಗಳಲ್ಲಿ ಕಬ್ಜ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಾಳೆ (ಸೆ.18) ಉಪೇಂದ್ರ ಅವರ ಹುಟ್ಟು ಹಬ್ಬಕ್ಕೆ ಚಿತ್ರತಂಡ ಈ ಉಡುಗೊರೆ ನೀಡಿದೆ.
PublicNext
17/09/2022 06:00 pm