ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ 72ನೇ ಬರ್ತ್ ಡೇ ಅಭಿಮಾನ್ ಸ್ಟುಡಿಯೋ ಬಳಿ ವಿಷ್ಣುವರ್ಧನ್ ಅವರ ಕಟೌಟ್ಸ್ ಹಾಕಿ ಫ್ಯಾನ್ಸ್ ಸಂಭ್ರಮಿಸಿದ್ದಾರೆ.ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ ಜನ್ಮದಿನ. ಸೆಪ್ಟಂಬರ್ 18 ವಿಷ್ಣುದಾದಾ ಅಭಿಮಾನಿಗಳಿಗೆ ವಿಶೇಷ ದಿನ.
ಅಭಿಮಾನಿಗಳ ಪ್ರೀತಿಯ ಯಜಮಾನ ಇಂದು ನಮ್ಮೊಂದಿಗೆ ಇದ್ದಿದ್ದರೆ ತಮ್ಮ 72ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು. ದುರಾದೃಷ್ಟವಶಾತ್ ಡಾ.ವಿಷ್ಣುವರ್ಧನ್ ಇಂದು ನಮ್ಮ ಜೊತೆ ಇಲ್ಲ. ದೈಹಿಕವಾಗಿ ಡಾ.ವಿಷ್ಣುವರ್ಧನ್ ನಮ್ಮೊಂದಿಗೆ ಇಲ್ಲದಿದ್ದರೂ, ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ವಿಷ್ಣುದಾದಾ ಅಜರಾಮರ.
ಡಾ.ವಿಷ್ಣುವರ್ಧನ್ ರನ್ನು ಸ್ಮರಿಸಿದ ಗಣ್ಯರು
ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ, 'ನೂರಾರು ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕ ಜನರನ್ನು ರಂಜಿಸಿ, ಅಭಿಮಾನಿಗಳಿಂದ ಸಾಹಸ ಸಿಂಹ ಎಂಬ ಬಿರುದು ಪಡೆದ ಯಜಮಾನ ದಿವಂಗತ ವಿಷ್ಣುವರ್ಧನ್ ರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು' ಎಂದು ಹೇಳಿದ್ದಾರೆ.
ಇನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಡಲ್ ವುಡ್ ಸಿರಿವಂತನನ್ನು ಸ್ಮರಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಕೂಡ ಟ್ವೀಟ್ ಮಾಡಿ ವಿಶ್ ಮಾಡಿ ವಿಷ್ಣುವರ್ಧನ್ ಅವರನ್ನು ಸ್ಮರಿಸಿದ್ದಾರೆ.
PublicNext
18/09/2022 12:48 pm