ತೆಲುಗಿನ ಪುಷ್ಪ 2 ಮತ್ತು ವಿಜಯ್ ಅವರೊಂದಿಗೆ ವರಸುಡು ಚಿತ್ರದಲ್ಲಿ ನಟಿಸುತ್ತಿರುವ ನಟಿ ರಶ್ಮಿಕಾ ಈಗಾಗಲೇ ಬಾಲಿವುಡ್ ಗೆ ಗುಡ್ ಬೈ ಮುಗಿಸಿರುವ ರಶ್ಮಿಕಾ ಮಿಷನ್ ಮಜ್ನು ಹಾಗೂ ಅನಿಮಲ್ ಮೂಲಕ ಬಿಟೌನ್ ಪ್ರೇಕ್ಷಕರನ್ನು ಸ್ವಾಗತಿಸಲು ತಯಾರಿ ನಡೆಸುತ್ತಿದ್ದಾರೆ.
ಇದರ ಮಧ್ಯೆ ಸ್ಯಾಂಡಲ್ ವುಡ್ ಸುಂದರಿ, ರಶ್ಮಿಕಾ ಮಂದಣ್ಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸುದ್ದಿ ಕೇಳಿದ ಅಭಿಮಾನಿಗಳು ಶಾಕ್ ಆಗಿದ್ದರು.
ಆದರೆ ನಟಿಯು ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಚಿಕಿತ್ಸೆಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಫೋಟೋ ಹಂಚಿಕೊಳ್ಳುವ ಮೂಲಕ ಹೈದಾಬಾದ್ ನಲ್ಲಿನ ಪ್ರಮುಖ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ಸತತ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಕಾರಣ ಮೊಣಕಾಲಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರನ್ನು ಭೇಟಿಯಾಗಿ ಚಿಕಿತ್ಸೆ ಪಡೆದರು. ಈ ವೇಳೆ ನಟಿಯ ಜೊತೆಗೆ ತೆಗೆದ ಫೋಟೋವನ್ನು ವೈದ್ಯರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
PublicNext
24/09/2022 04:57 pm