ಮುಂಬೈ: ಭಾರತ ಸರಕಾರದಿಂದ ಸಿನಿಮಾ ಕ್ಷೇತ್ರದ ಸಾಧಕರಿಗೆ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಹಿರಿಯ ನಟಿ ಆಶಾ ಪಾರೇಖ್ ಆಯ್ಕೆಯಾಗಿದ್ದಾರೆ.
2019ರಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ದಾದಾ ಸಾಹೇಬ್ ಪ್ರಶಸ್ತಿ ನೀಡಲಾಗಿತ್ತು. ಇದೀಗ 2020ನೇ ಸಾಲಿನ ಪ್ರಶಸ್ತಿ ಪ್ರಕಟವಾಗಿದೆ. 79 ವರ್ಷದ ಹಿರಿಯ ನಟಿ ಆಶಾ ಪಾರೇಖ್ ಸಿನಿರಂಗದಲ್ಲಿ ಮಾಡಿದ ಸಾಧನೆಗಾಗಿ ಅತ್ಯುನ್ನತ ಪ್ರಶಸ್ತಿಗೆ ಕೊಡಲಾಗುತ್ತಿದೆ. ಶುಕ್ರವಾರ ನಡೆಯಲಿರುವ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಶಾ ಪಾರೇಖ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
ಆಶಾ ಭೋಂಸ್ಲೆ, ಹೇಮಾ ಮಾಲಿನಿ, ಪೂನಂ ಧಿಲ್ಲೋನ್, ಉದಿತ್ ನಾರಾಯಣ್ ಹಾಗೂ ಟಿ.ಎಸ್. ನಾಗಾಭರಣ ಅವರನ್ನು ಒಳಗೊಂಡ ಸದಸ್ಯರ ಸಮಿತಿ ಆಶಾ ಪಾರೇಖ್ ಅವರ ಹೆಸರನ್ನು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. 1992 ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ತನ್ನ ಹತ್ತನೇ ವಯಸ್ಸಿನಲ್ಲಿ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಆಶಾ ಪಾರೇಖ್, ಕಳೆದ ಐದು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿದ್ದಾರೆ. ಹಿರಿಯ ನಟಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
PublicNext
27/09/2022 03:49 pm