ರಾಕಿಂಗ್ ಸ್ಟಾರ್ ಯಶ್ ತಮ್ಮ ಮಗಳು ಐರಾ ಜೊತೆಗೆ ತುಂಟಾಟ ಮಾಡಿದ ವಿಡಿಯೋ ವೈರಲ್ ಆಗಿದೆ. ಯಶ್ ಕೆಜಿಎಫ್ ಚಾಪ್ಟರ್ 2 ಬಳಿಕ ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಅದರಲ್ಲೂ ಪ್ರೀತಿಯ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸಖತ್ ಎಂಜಾಯ್ ಮಾಡುತ್ತಿರುವುದು ಎಲ್ಲರ ಮನ ಗೆದ್ದಿದೆ.
ಇದೀಗ ಮಗಳು ಐರಾ ಜತೆಗಿನ ತುಂಟಾಟದ ವಿಡಿಯೊವೊಂದನ್ನ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಶೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟೀವ್ ಆಗಿರುವ ಯಶ್, ತಮ್ಮ ಅಭಿಮಾನಿಗಳಿಗೊಸ್ಕರ ಹೊಸ ಹೊಸ ರೀತಿಯ ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. .
ಯಶ್ ಮಗಳ ವಿಡಿಯೋವನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
PublicNext
27/09/2022 05:35 pm