ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಆದಿಪುರುಷ್’ ಸಿನಿಮಾದ ಟೀಸರ್ ಅಕ್ಟೋಬರ್ 2ರಂದು ಅಯೋಧ್ಯೆಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ಗೆ ಮಿಶ್ರ ಪ್ರತಿಕ್ರಿಯೆ ಕೂಡಾ ವ್ಯಕ್ತವಾಗಿದೆ. ಇದರ ನಡುವೆ 100 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಸದ್ಯ ಟೀಸರ್ ಬಿಡುಗಡೆ ಸಮಾರಂಭದ ನಂತರ ಪ್ರಭಾಸ್ ಗರಂ ಆಗಿದ್ದಾರೆ. ಚಿತ್ರದ ನಿರ್ದೇಶಕ ಓಂ ರಾವುತ್ ಮೇಲೆ ಕೋಪ ಮಾಡಿಕೊಂಡ ವಿಡಿಯೋವೊಂದು ಸಖತ್ ವೈರಲ್ ಆಗಿದೆ.
ಅಯೋಧ್ಯೆಯಲ್ಲಿ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ಪ್ರಭಾಸ್, ಸೈಫ್ ಅಲಿಖಾನ್, ಕೃತಿ ಸನೂನ್, ಸನ್ನಿ ಸಿಂಗ್ ಸೇರಿದಂತೆ ಸಾಕಷ್ಟು ಕಲಾವಿದರು ಭಾಗಿಯಾಗಿದ್ದರು. ಈ ಸಮಾರಂಭದ ನಂತರ ತಾವು ತಂಗಿದ್ದ ಹೋಟೆಲ್ ಗೆ ತೆರಳಿರುವ ಪ್ರಭಾಸ್, ಕಾರಿಡಾರ್ ನಲ್ಲೇ ‘ಏ ಓಂ.. ನನ್ನ ರೂಮ್ ಗೆ ಬಾರೋ, ಬಾರೋ ನನ್ ರೂಮ್ ಗೆ’ ಎಂದು ಕೋಪದಲ್ಲಿಯೇ ಹೇಳುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟೀಸರ್ ಬಗ್ಗೆ ಪ್ರಭಾಸ್ ಅಭಿಮಾನಿಗಳು ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅತ್ಯಂತ ಕಳಪೆ ಮಟ್ಟದ ಗ್ರಾಫಿಕ್ಸ್ ಬಳಸಿದ್ದಾರೆ ಎನ್ನುವ ಆರೋಪ ಇದೆ. ಈ ಕಾರಣಕ್ಕಾಗಿಯೇ ನಿರ್ದೇಶಕರ ಮೇಲೆ ಪ್ರಭಾಸ್ ಗರಂ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.ಆದರೆ ಈ ಕುರಿತು ಪ್ರಭಾಸ್ ಯಾವುದೇ ಪ್ರತಿಕ್ರಿಯೆ,ಸ್ಪಷ್ಟನೆ ನೀಡಿಲ್ಲ. ಆದರೆ, ವಿಡಿಯೋ ಮಾತ್ರ ಹಲವು ಅನುಮಾನಗಳಿಗೆ ಕಾರಣವಾಗಿದೆ.
PublicNext
04/10/2022 06:08 pm