ಮೋಹಕ ತಾರೆ ರಮ್ಯಾ ಅವರು ದಸರಾ ಹಬ್ಬದ ದಿನದಂದು ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ರಮ್ಯಾ ಅವರು ನಿರ್ಮಾಣ ಮಾಡಿರುವ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್‌ನ ಮೊದಲ ಚಿತ್ರದ ಹೆಸರು ಘೋಷಣೆಯಾಗಿದೆ.
ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿದ್ದ ಪೋಸ್ಟರ್ವೊಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ. ಈ ಚಿತ್ರವನ್ನು ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ನಿರ್ಮಿಸಲಾಗುತ್ತಿದೆ.
ಈ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ ಹಾಗೂ ರಮ್ಯಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಥೆ, ನಿರ್ದೇಶನವನ್ನು ರಾಜ್ ಬಿ. ಶೆಟ್ಟಿ ಮಾಡುತ್ತಿದ್ದಾರೆ. ರಾಜ್ ಬಿ. ಶೆಟ್ಟಿ ಅವರ ಗರುಡ ಗಮನ ವೃಷಭ ವಾಹನ ಚಿತ್ರದ ತಂಡವೇ ಇಲ್ಲಿ ಕೆಲಸ ಮಾಡಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮಿಥುನ್ ಮುಕುಂದನ್ ಅವರ ಸಂಗೀತ, ಪ್ರವೀಣ್ ಶ್ರೀಯಾನ್ ಅವರ ಸಂಗೀತವಿದೆ. ರಮ್ಯಾ ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಕೊಡ್ತೀನಿ ಅಂತ ತಿಳಿಸಿದ್ದಾರೆ.
PublicNext
05/10/2022 05:18 pm