ಬೆಂಗಳೂರು: ಮದುವೆಯಾದ ನಾಲ್ಕು ತಿಂಗಳಿಗೆ ನಟಿ ನಯನತಾರಾ, ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಅವಳಿ ಗಂಡು ಮಕ್ಕಳಿಗೆ ಪಾಲಕರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಘ್ನೇಶ್ ಶಿವನ್ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಬಾಡಿಗೆ ತಾಯ್ತನ ಅಥವಾ ದತ್ತು ಪಡೆಯುವ ಮೂಲಕ ದಂಪತಿ ಮಕ್ಕಳನ್ನು ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಿಖರವಾದ ವಿವರಗಳು ಇನ್ನೂ ಲಭ್ಯವಾಗಿಲ್ಲ. ಇದೇ ವೇಳೆ ಅವರು ಮಕ್ಕಳ ಫೋಟೋಗಳನ್ನೂ ಶೇರ್ ಮಾಡಿದ್ದಾರೆ. ಇದು ಅಭಿಮಾನಿಗಳ ಖುಷಿಗೆ ಕಾರಣವಾಗಿದೆ.
ಈ ಬಗ್ಗೆ ಬರೆದಿರುವ ವಿಘ್ನೇಶ್ ನಯನ ಮತ್ತು ನಾನು ಅಮ್ಮ ಮತ್ತು ಅಪ್ಪ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳಾಗಿವೆ. ನಮ್ಮ ಎಲ್ಲಾ ಪ್ರಾರ್ಥನೆ, ನಮ್ಮ ಪೂರ್ವಜರ ಆಶೀರ್ವಾದ ಎಲ್ಲಾ ಒಳ್ಳೆಯ ಅಭಿವ್ಯಕ್ತಿಗಳ ಹಾರೈಕೆಯ ಫಲವಾಗಿ ನಮಗೆ ಈ ಮಕ್ಕಳಾಗಿವೆ. ನಿಮ್ಮೆಲ್ಲರ ಆಶೀರ್ವಾದ ನಮಗೆ ಬೇಕು ಎಂದಿದ್ದಾರೆ.
PublicNext
09/10/2022 08:13 pm