ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು; ಸ್ಥಿತಿ ಗಂಭೀರ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಖಳನಟನಾಗಿ ಜನಪ್ರಿಯರಾಗಿರುವ ಶರತ್ ಲೋಹಿತಾಶ್ವ ಅವರ ತಂದೆಯವರಾಗಿದ್ದಾರೆ.

ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

Edited By : Vijay Kumar
PublicNext

PublicNext

10/10/2022 07:22 am

Cinque Terre

110.13 K

Cinque Terre

4