ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿರುವ ಕಾಂತಾರ ಸಿನಿಮಾಗೆ ಎಲ್ಲೆಡೆ ಭಾರೀ ಹವಾ ಸೃಷ್ಟಿಯಾಗಿದೆ.ಸದ್ಯ ಪೃಥ್ವಿರಾಜ್ ಪ್ರೊಡಕ್ಷನ್ಸ್ ಅಡಿಯಲ್ಲಿ 'ಕಾಂತಾರ'ಮಲಯಾಳಂ ಆವೃತ್ತಿ ರಿಲೀಸ್ ಆಗಲಿದೆ.ಹೌದು ಕಾಂತಾರ ಯಶಸ್ಸಿನಿಂದ ಪ್ರೇರಿತರಾದ ಚಿತ್ರತಂಡ ತಮಿಳು ಮತ್ತು ಮಲಯಾಳಂ ಸೇರಿದಂತೆ ಚಿತ್ರದ ಡಬ್ಬಿಂಗ್ ಆವೃತ್ತಿಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ.
ನಟ ಪೃಥ್ವಿರಾಜ್ ಸುಕುಮಾರನ್ ಅವರ ಬ್ಯಾನರ್ ಪೃಥ್ವಿರಾಜ್ ಪ್ರೊಡಕ್ಷನ್ಸ್ ಮಲಯಾಳಂ ಆವೃತ್ತಿಯನ್ನು ಕೇರಳದಾದ್ಯಂತ ಬಿಡುಗಡೆ ಮಾಡಲಿದೆ. ಈ ಬಗ್ಗೆ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದ ಮೂಲಕ ಖಚಿತ ಪಡಿಸಿದ್ದಾರೆ. ಬಿಡುಗಡೆ ದಿನಾಂಕ ನಿಗದಿಯಾಗಿಲ್ಲ.ಈ ಹಿಂದೆ ಪೃಥ್ವಿರಾಜ್ ಕೂಡ 'ಕಾಂತಾರ' ಸಿನಿಮಾವನ್ನು ಹೊಗಳಿ ಟ್ವೀಟ್ ಮಾಡಿದ್ದರು.
PublicNext
10/10/2022 05:42 pm