ಲಕ್ನೋ: ನಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿ, ನಮ್ಮನ್ನಲ್ಲ ಎಂದು ಉತ್ತರ ಪ್ರದೇಶದ ಹತ್ರಾಸ್ ಸಂತ್ರಸ್ತೆಯ ಪೋಷಕರು ಕಿಡಿಕಾರಿದ್ದಾರೆ.
ಸಂತ್ರಸ್ತೆಯ ತಾಯಿ ಮಾತನಾಡಿ, ಪ್ರಕರಣವು ಗೊಂದಲಮಯಗೊಳ್ಳಲು ಜಿಲ್ಲಾ ಮ್ಯಾಜಿಸ್ಪ್ರೇಟರೇ ಕಾರಣ. ನನ್ನ ಮಗಳ ಮೃತದೇಹವನ್ನು ಉತ್ತರ ಪ್ರದೇಶ ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದರು. ಆ ನಂತರ ನಮ್ಮ ಮೇಲೆ ಜಿಲ್ಲಾ ಮ್ಯಾಜಿಸ್ಪ್ರೇಟರು ಒತ್ತಡ ಹೇರಿ ಹೇಳಿಕೆ ಬದಲಾಯಿಸುವಂತೆ ಮಾಡಿದರು ಎಂದು ಆರೋಪಿಸಿದ್ದಾರೆ.
ತನಿಖೆಗಾಗಿ ರಾಜ್ಯ ಸರ್ಕಾರ ನೇಮಿಸಿದ್ದ ಎಸ್‌ಐಟಿ ಕೂಡ ಸಂತ್ರಸ್ತೆ ಕುಟುಂಬದ ಸದಸ್ಯರನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲು ಸರ್ಕಾರದ ಅನುಮತಿ ಕೋರಿತ್ತು. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದಾರೆ.
PublicNext
04/10/2020 10:44 pm