ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಕಿಂಗ್ ಹೋಗಿದ್ದ ಬಿಜೆಪಿ ಶಾಸಕನ ಸಂಬಂಧಿಗೆ ಗುಂಡಿಕ್ಕಿ ಹತ್ಯೆ

ಲಕ್ನೋ: ವಾಕಿಂಗ್ ಹೋಗಿದ್ದ ಬಿಜೆಪಿ ಶಾಸಕನ ಸಂಬಂಧಿಯನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ನಡೆದಿದೆ.

ಮುರಾದನಗರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಜಿತ್ ಪಾಲ್ ಸಂಬಂಧಿ ನರೇಶ್ ತ್ಯಾಗಿ (58) ಮೃತ ದುರ್ದೈವಿ. ನರೇಶ್ ಪಿಡಬ್ಲ್ಯುಡಿ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಮನೆಯ ಬಳಿ ವಾಕಿಂಗ್ ಹೋಗಿದ್ದರು. ಈ ವೇಳೆ ಎರಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಾಜಿಯಾಬಾದ್ ಪೊಲೀಸರು ಆರೋಪಿಗಳಿಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

09/10/2020 11:26 am

Cinque Terre

71.82 K

Cinque Terre

0