ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಿಬಿಯಾದಲ್ಲಿ ಏಳು ಮಂದಿ ಭಾರತೀಯರ ಅಪಹರಣ

ನವದೆಹಲಿ: ಲಿಬಿಯಾದಲ್ಲಿ ಆಂಧ್ರಪ್ರದೇಶ, ಉತ್ತರ ಪ್ರದೇಶ, ಬಿಹಾರ್, ಗುಜರಾತ್ ಮೂಲದ 7 ಮಂದಿ ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, 'ಕಳೆದ ತಿಂಗಳು ಏಳು ಭಾರತೀಯರನ್ನು ಅಪಹರಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಆಫ್ರಿಕನ್ ದೇಶವಾದ ಲಿಬಿಯಾದ ಅಧಿಕಾರಿಗಳ ಜೊತೆ ಭಾರತ ನಿಕಟ ಸಂಪರ್ಕದಲ್ಲಿದೆ. ಸೆಪ್ಟೆಂಬರ್ 14ರಂದು ಭಾರತಕ್ಕೆ ಮರಳಲು ತ್ರಿಪೋಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಆಶ್ವೆರಿಫ್ ಎಂಬ ಸ್ಥಳದಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

09/10/2020 11:38 am

Cinque Terre

48.52 K

Cinque Terre

0