ಲಕ್ನೋ: ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಶಿರಚ್ಛೇದ ಮಾಡಿ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಉತ್ತರ ಪ್ರದೇಶದ ಬಾಂಡಾದಲ್ಲಿ ನಡೆದಿದೆ. ಆರೋಪಿ ಪತ್ನಿ ತಲೆಯನ್ನು ಹಿಡಿದು ಠಾಣೆಗೆ ಹೋಗುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಆರೋಪಿಯನ್ನು ಚಿನ್ನಾರ್ ಯಾದವ್ ಹಾಗೂ ಮೃತ ಪತ್ನಿಯನ್ನು ವಿಮಲಾ (35) ಎಂದು ಗುರುತಿಸಲಾಗಿದೆ. ಘಟನೆ ಇಂದು ಬೆಳಗ್ಗೆ 7:30ರ ಸುಮಾರಿಗೆ ನೇತಾನಗರದಲ್ಲಿರುವ ನಿವಾಸದಲ್ಲಿ ನಡೆದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್‌ಪಿ ಮಹೇಂದ್ರ ಪ್ರತಾಪ್ ಸಿಂಗ್ ಚೌಹಾಣ್, ಚಿನ್ನಾರ್ ಹಾಗೂ ವಿಮಲಾ ಮಧ್ಯೆ ಇಂದು ಬೆಳಗ್ಗೆ ಕುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿದ್ದು, ಚಿನ್ನಾರ್ ಕೊಡಲಿಯಿಂದ ಪತ್ನಿಯ ತಲೆಯನ್ನು ಕತ್ತರಿಸಿದ್ದಾನೆ. ಬಳಿಕ ತಲೆಯನ್ನು ಹಿಡಿದುಕೊಂಡು ಬಾಬೆರು ಪೊಲೀಸ್ ಠಾಣೆಗೆ ತೆರಳಿ, ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿಸಿದ್ದಾರೆ.
PublicNext
09/10/2020 01:30 pm