ಶಿಮ್ಲಾ: ಹಿಮಾಚಲ ಪ್ರದೇಶದ ಹರೋಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಉನಾ ಜಿಲ್ಲೆಯ ಹರೋಲಿ ಗ್ರಾಮದ 22 ವರ್ಷದ ಯುವತಿ ಮೇಲೆ ಮೂವರು ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ ಸಂಬಂಧ ಶುಕ್ರವಾರ ಹರೋಲಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತೆ ಹೇಳಿಕೆಯನ್ನಾಧರಿಸಿ ಮೂವರನ್ನ ಬಂಧಿಸಿದ್ದಾರೆ.
ಶನಿವಾರ ತಡರಾತ್ರಿ ಮೂವರ ಬಂಧನವಾಗಿದ್ದು, ಸಂತ್ರಸ್ತೆ ಮತ್ತು ಆರೋಪಿಗಳು ಒಂದೇ ಗ್ರಾಮದ ನಿವಾಸಿಗಳಾಗಿದ್ದಾರೆ. ಪ್ರಕರಣ ಸಂಬಂಧ ಗ್ರಾಮಸ್ಥರು ಮತ್ತು ಕುಟುಂಬದವರ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.
PublicNext
11/10/2020 09:31 am