ಡೆಹರಾಡೂನ್: ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಉತ್ತರಾಖಂಡದ ರುದ್ರಪುರದಲ್ಲಿ ನಡೆದಿದೆ.
ರುದ್ರಪುರ ಮಹಾನಗರ ಪಾಲಿಕೆಯ ಬಿಜೆಪಿ ಕೌನ್ಸಿಲರ್ ಪ್ರಕಾಶ್ ಧಾಮಿ ಕೊಲೆಯಾದವರು. ಉಧಮ್ ಸಿಂಗ್ ಜಿಲ್ಲೆಯ ಕೆಲವು ಅಪರಿಚಿತ ವ್ಯಕ್ತಿಗಳು ಸೋಮವಾರ ಬೆಳಿಗ್ಗೆ ಪ್ರಕಾಶ್ ಅವರ ಮನೆಯ ಮುಂದೆಯೇ ಕೃತ್ಯ ಎಸೆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಅಪರಿಚಿತ ದುಷ್ಕರ್ಮಿಗಳು ಕಾರಿನಲ್ಲಿ ಬಂದು ದಾಳಿ ನಡೆಸಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸ್‌ಎಸ್‌ಪಿ ದಿಲೀಪ್ ಸಿಂಗ್ ಕುನ್ವಾರ್ ತಿಳಿಸಿದ್ದಾರೆ.
PublicNext
12/10/2020 02:28 pm