ಭೋಪಾಲ್: ಇಬ್ಬರು ಮಹಿಳೆಯರಿದ್ದ ಸ್ಕೂಟಿಗೆ ಆಟೋ ಚಾಲಕ ಡಿಕ್ಕಿ ಹೊಡೆದಿದ್ದರಿಂದ ಆತನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಧರ್ತಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಜನರು ಹಲ್ಲೆಯನ್ನು ತಡೆಯಲು ಪ್ರಯತ್ನಿಸದೆ ಸುಮ್ಮನೆ ನೋಡುತ್ತಾ ನಿಂತಿದ್ದರೆ, ಕೆಲವರು ವಿಡಿಯೋ ಮಾಡಿದ್ದಾರೆ. ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಯು ಆಟೋ ಚಾಲಕನನ್ನು ಸಾರ್ವಜನಿಕ ಸ್ಥಳದಲ್ಲೇ ಥಳಿಸಿದ್ದಾನೆ. ಅಷ್ಟೇ ಅಲ್ಲದೆ ಕಬ್ಬಿಣದ ಪ್ಲೇಟ್ ಎತ್ತಿ ಚಾಲಕನ ಮೇಲೆ ಎಸೆದ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದೆ.
ಚಾಲಕ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದರೂ ಬಿಡದ ಆರೋಪಿಯು ಕೂದಲನ್ನು ಹಿಡಿದು ಎಳೆದು ಹಲ್ಲೆ ಮಾಡಿದ್ದಾನೆ. ಇದೇ ವೇಳೆ ಆರೋಪಿಯ ಸಹಚರನೊಬ್ಬ ಚಾಲಕನಿಗೆ ಕಪಾಳಮೋಕ್ಷ ಮಾಡುತ್ತಾನೆ. ಬಳಿಕ ಆರೋಪಿಯು ಚಾಲಕನನ್ನು ಬೈಕ್ ಮೇಲೆ ಹಾಕಿಕೊಂಡು ಹೋಗುತ್ತಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಹಲ್ಲೆಕೋರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
PublicNext
13/10/2020 11:08 am