ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ ವಿಧಾನಸಭೆ ಗೇಟ್ ಮುಂದೆ ಮಹಿಳೆಯೊಬ್ಬಳು ಇಂದು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಮಹಾರಾಜ್ ಗಂಜ್ ಮೂಲದ ಅಂಜನಾ ತಿವಾರಿ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮಹಿಳೆಯು ಮತಾಂತರಗೊಂಡು ಓರ್ವ ವ್ಯಕ್ತಿಯನ್ನು ವಿವಾಹವಾಗಿದ್ದಾಳೆ. ಆದರೆ ಆಕೆಯನ್ನು ಬಿಟ್ಟು ಪತಿ ಸೌದಿ ಅರೇಬಿಯಾಕ್ಕೆ ಹೋಗಿದ್ದಾನೆ. ಹೀಗಾಗಿ ತನಗೆ ನ್ಯಾಯಕೊಡಿಸಬೇಕು ಎಂದು ಬೆಂಕಿ ಹಚ್ಚಿಕೊಂಡಿದ್ದಾಳೆ ಎನ್ನಲಾಗಿದೆ.
ಮಹಿಳೆ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ತಕ್ಷಣವೇ ಪೊಲೀಸರು ಹಾಗೂ ಸ್ಥಳದಲ್ಲಿದ್ದ ಮಾಧ್ಯಮ ವರದಿಗಾರರು ಬೆಂಕಿ ನಂದಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.
PublicNext
13/10/2020 04:51 pm