ಲಕ್ನೋ: ದೇಶಾದ್ಯಂತ ಸಂಚಲ ಮೂಡಿಸಿದ್ದ 19 ವರ್ಷದ ಯುವತಿಯ ಗ್ಯಾಂಗ್‍ರೇಪ್ ಪ್ರಕರಣ ಮಾಸುವ ಮುನ್ನವೇ ಹತ್ರಾಸ್‌ನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ.
ಹತ್ರಾಸ್ ಜಿಲ್ಲೆಯ ಸಾಸ್ನಿ ಪ್ರದೇಶದಲ್ಲಿ 4 ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮಹಿಳಾ ಅಧಿಕಾರಿ ರುಚಿ ಗುಪ್ತಾ ತಿಳಿಸಿದ್ದಾರೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
PublicNext
14/10/2020 09:28 am